ಬೆಂಗಳೂರು, ಏ.16-ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಹಾಗೂ ಪೆÇಲೀಸರು ಎರಡು ಕಾರುಗಳಲ್ಲಿದ್ದ 5.60ಲಕ್ಷ ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೆÇಲೀಸ್ ಠಾಣಾ ವ್ಯಾಪ್ತಿಗೆ ಬರುವ ಪೂಜನಹಳ್ಳಿಯಲ್ಲಿ ನಿರ್ಮಿಸಲಾಗಿರುವ ಚುನಾವಣಾ ಚೆಕ್ಪೆÇೀಸ್ಟ್ ಬಳಿ ಪೆÇಲೀಸರು ಹಾಗೂ ಚುನಾವಣಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ವೇಳೆ ಈ ಮಾರ್ಗದಲ್ಲಿ ಬಂದ ಕಾರೊಂದನ್ನು ತಡೆದು ಪರಿಶೀಲಿಸಿದಾಗ ಅದರಲ್ಲಿ ಯಾವುದೇ ದಾಖಲೆಗಳಿಲ್ಲದ 3.60 ಲಕ್ಷ ರೂ. ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಲ್ಲದೆ, ಇದೇ ಮಾರ್ಗದಲ್ಲಿ ಬಂದ ಮತ್ತೊಂದು ಕಾರನ್ನು ತಡೆದು ಪರಿಶೀಲಿಸಿದಾಗ ಅದರಲ್ಲಿ 2 ಲಕ್ಷ ರೂ. ಹಣವಿರುವುದು ಪತ್ತೆಯಾಗಿದೆ. ಹಣದ ಬಗ್ಗೆ ವಿಚಾರಿಸಿದಾಗ ಯಾವುದೇ ದಾಖಲೆಗಳು ಇಲ್ಲದ ಕಾರಣ ಈ ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.