ಮೈಸೂರು, ಏ.17- ರಾತ್ರೋರಾತ್ರಿ ಮೈಸೂರು ಜಿಲ್ಲಾಧಿಕಾರಿಯನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ಮೈಸೂರು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರನ್ನು ಸರ್ಕಾರ ರಾತ್ರೋರಾತ್ರಿ ದಿಢೀರ್ ವರ್ಗಾವಣೆ ಮಾಡಿದೆ.
ರಾಜ್ಯ ವಿಧಾನಸಭಾ ಚುನಾವಣೆಯ ಅಧಿಸೂಚನೆ ಹೊರಬೀಳುವ ಹಿಂದಿನ ದಿನ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕೆ.ಬಿ.ಶಿವಕುಮಾರ್ ಅವರನ್ನು ನೇಮಿಸಲಾಗಿತ್ತು. ಆದರೆ, ಇದೀಗ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ರಾತ್ರಿ ಶಿವಕುಮಾರ್ ಅವರನ್ನು ಮೈಸೂರಿನಿಂದ ವರ್ಗಾವಣೆ ಮಾಡಲಾಗಿದೆ.
ಕೈಗಾರಿಕಾ ಅಭಿವೃದ್ಧಿ ಆಯುಕ್ತ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶಕ ದರ್ಪಣ್ ಜೈನ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ದರ್ಪಣ್ ಜೈನ್ ಅವರು ಇದ್ದ ಹುದ್ದೆಗೆ ಶಿವಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಕೂಡಲೇ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ದರ್ಪಣ್ ಜೈನ್ ಅವರಿಗೆ ಸೂಚಿಸಲಾಗಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿ ಕೆಲ ಹಿರಿಯ ಅಧಿಕಾರಿಗಳು ಕಾಂಗ್ರೆಸ್ ಪರ ಚುನಾವಣೆ ವೇಳೆ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಅಂತಹವರನ್ನು ವರ್ಗಾವಣೆ ಮಾಡಬೇಕು. ನ್ಯಾಯಸಮ್ಮತ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದರು.
ದೇವೇಗೌಡರು ಸಲ್ಲಿಸಿದ ಮನವಿಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿಸಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಶಿವಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.