ಚೆನ್ನೈ, ಏ.18 – ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಮತ್ತು ಗಾಂಧಿನಗರ ಕ್ಷೇತ್ರಗಳಲ್ಲಿ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಂದಿನ ತಿಂಗಳು 12 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಈ ಎರಡೂ ಕ್ಷೇತ್ರಗಳಲ್ಲಿ ತನ್ನ ಉಮೇದುವಾರರನ್ನು ಸ್ಪರ್ಧೆಗೆ ನಿಲ್ಲಿಸಲು ಎಐಎಡಿಎಂಕೆ ಆಕಾಂಕ್ಷೆ ಹೊಂದಿದೆ. ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಮತ್ತು ಪಕ್ಷದ ಸಂಯೋಜಕ ಉಪ ಮುಖ್ಯಮಂತ್ರಿ ಓ.ಪನ್ನೀರ್ಸೆಲ್ವಂ ಅವರ ಹೆಸರಿನಲ್ಲಿ ಬಿಡುಗಡೆ ಮಾಡಲಾದ ಹೇಳಿಕೆಯಲ್ಲಿ ಇದನ್ನು ತಿಳಿಸಲಾಗಿದೆ. 2013ರ ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಐದು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ನಿಲ್ಲಿಸಿತ್ತು.