ಅಬಕಾರಿ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ :

ಮಂಡ್ಯ,ಏ.18- ವಿಧಾನಸಭಾ ಚುನಾವಣೆ ಸಂಬಂಧ ಅಬಕಾರಿ ಅಕ್ರಮ ತಡೆಗಟ್ಟಲು ಅಬಕಾರಿ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ ಮಾಡಿ ಮೂರು ಘೋರ ಪ್ರಕರಣಗಳು, ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.
ದಾಳಿ ವೇಳೆ 31 ಲೀಟರ್ ಅಕ್ರಮ ಮದ್ಯ, 10 ಲೀಟರ್ ಬಿಯರ್, ಮೂರು ದ್ವಿಚಕ್ರ ವಾಹನ ವಶಪಡಿಸಿಕೊಂಡು ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಅಬಕಾರಿ ಇಲಾಖೆ ಪ್ರಕಟಣೆ ತಿಳಿಸಿದೆ. ಚುನಾವಣಾ ಸಂಬಂಧ ಅಬಕಾರಿ ಅಧಿಕಾರಿಗಳು ಎಲ್ಲೆಡೆ ಹದ್ದಿನ ಕಣ್ಣಿಟ್ಟು, ಅಕ್ರಮ ಮದ್ಯವನ್ನು ವಶಪಡಿಸಿಕೊಂಡ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ