ಬೆಂಗಳೂರು, ಫೆ.17- ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿ ಸ್ವಂತ ಬಲದ ಮೇಲೆ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯುವ ಮಹತ್ವಾಕಾಂಕ್ಷೆ ಹೊಂದಿರುವ ಜೆಡಿಎಸ್ ಪಕ್ಷ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗಿಂತ ಮೊದಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಇಂದು ನಗರದ ಹೊರವಲಯ ಯಲಹಂಕಲ್ಲಿ ಏರ್ಪಡಿಸಿದ್ದ ವಿಕಾಸಪರ್ವ ಬೃಹತ್ ಸಮಾವೇಶದಲ್ಲಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ ಅಚ್ಚರಿ ಮೂಡಿಸಿದೆ.
ಜೆಡಿಎಸ್ ಚುನಾವಣಾ ಸಮರದ ರಣಕಹಳೆ ಮೊಳಗಿಸಿದೆ. ರಾಜ್ಯಸಭೆ ಚುನಾವಣೆಯಲ್ಲಿ ವ್ಹಿಪ್ ಉಲ್ಲಂಘಿಸಿ ಮತದಾನ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿರುವ 7 ಮಂದಿ ಶಾಸಕರನ್ನು ಹೊರತುಪಡಿಸಿ ಉಳಿದ 33 ಮಂದಿಯಲ್ಲಿ 27 ಶಾಸಕರಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ.
ಕೊನೆ ಗಳಿಗೆಯಲ್ಲಿ ಕೆಲವೊಂದು ಕ್ಷೇತ್ರಗಳಲ್ಲಿ ಬದಲಾವಣೆಯಾದರೂ ಅಚ್ಚರಿ ಪಡಬೇಕಾಗಿಲ್ಲ.