ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕೆ.ವಿ.ಮಲ್ಲೇಶ್ ಅವರು ಇಂದು ನಾಮಪತ್ರ ಸಲ್ಲಿಸಿದರು:

ಮೈಸೂರು, ಏ.19-ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕೆ.ವಿ.ಮಲ್ಲೇಶ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ನಗರದ ನೂರೊಂದು ಗಣಪತಿ ದೇವಸ್ಥಾನಕ್ಕೆ ತೆರಳಿ ಮೊದಲು ಪೂಜೆ ಸಲ್ಲಿಸಿ ನಂತರ ಗನ್‍ಹೌಸ್ ಬಳಿ ಇರುವ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತದನಂತರ ಮೆರವಣಿಗೆಯಲ್ಲಿ ಮೈಸೂರು ನಗರ ಪಾಲಿಕೆ ತಲುಪಿ ಅಲ್ಲಿ ನಾಮಪತ್ರ ಸಲ್ಲಿಸಿದರು.
ಚಾಮರಾಜ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ವಾಸು ಅವರು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಕಚೇರಿಯಿಂದ ಪಕ್ಷದ ಮುಖಂಡರು, ಪಾಲಿಕೆ ಸದಸ್ಯರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಗರ ಪಾಲಿಕೆಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ವಿಶ್ವನಾಥ್ ನಾಮಪತ್ರ : ಹುಣಸೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ವಿಶ್ವನಾಥ್ ನಾಮಪತ್ರ ಸಲ್ಲಿಸಿದರು.
ಹುಣಸೂರಿನಲ್ಲಿರುವ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮೆರವಣಿಗೆ ಮೂಲಕ ತಾಲೂಕು ಕಚೇರಿ ತಲುಪಿ ನಾಮಪತ್ರ ಸಲ್ಲಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ