ಮೈಸೂರು:ಏ-20: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಾಲೆಯಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿಸಿದರು.
ನಾಮಪತ್ರ ಸಲ್ಲಿಸುವ ಮುನ್ನ ಹುಟ್ಟೂರು ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂಜೆ ಸಲ್ಲಿಸಿದರು. ಗ್ರಾಮಕ್ಕೆ ಆಗಮಿಸಿದ ಮುಖ್ಯಮಂತ್ರಿಯವರಿಗೆ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಕೋರಿದರು.
ಬಳಿಕ ಚಾಮುಂಡೇಶ್ವರಿ ಕ್ಷೇತ್ರದಿಂದ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಿದರು. ನಂತರದಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
Karnataka elections,CM Siddaramaiah,file nomination,Chamundeshwari constituency