ನವದೆಹಲಿ, ಏ.20-ಹನ್ನೆರಡು ವರ್ಷಗಳ ಕೆಳಗಿರುವ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣ ದಂಡನೆ ವಿಧಿಸುವ ಕಾನೂನಿಗೆ ತಿದ್ದುಪಡಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ಈ ಸಂಬಂಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ(ಪಿಐಎಲ್) ಅರ್ಜಿ ಸಂಬಂಧ ಸುಪ್ರೀಂ ಸೂಚನೆ ಮೇರೆಗೆ ಪ್ರಮಾಣಪತ್ರ ಸಲ್ಲಿಸಿರುವ ಕೇಂದ್ರ ಸರ್ಕಾರ ಪೆÇೀಕ್ಸೋ ಕಾಯ್ದೆಗೆ ಸೂಕ್ತ ತಿದ್ದುಪಡಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ದೇಶದ ವಿವಿಧ ರಾಜ್ಯಗಳಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು ಕಗ್ಗೊಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಇಂಥ ಕೃತ್ಯಗಳನ್ನು ಎಸಗುವ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಲು ಮುಂದಾಗಿದೆ.
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಇಂಥ ಪ್ರಕರಣಗಳ ಬಗ್ಗೆ ಈಗಾಗಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣಾ ಕಾಯ್ದೆ(ಪೆÇೀಕ್ಸೊ)ಗೆ ತಿದ್ದುಪಡಿ ತರಲು ಅವರು ಸಂಪುಟ ಟಿಪ್ಪಣಿಯೊಂದನ್ನು ಸಲ್ಲಿಸಿದ್ದರು.
ಕತುವಾ ಮತ್ತು ಉನ್ನಾವೋ ಗ್ಯಾಂಗ್ ರೇಪ್ ಅತ್ಯಾಚಾರ ಪ್ರಕರಣಗಳು ರಾಷ್ಟ್ರಾದ್ಯಂತ ಭಾರೀ ಪ್ರತಿಭಟನೆ ಮತ್ತು ಆಕ್ರೋಶ ಕಾರಣವಾಗಿರುವ ಬೆನ್ನಲ್ಲೇ ಕೇಂದ್ರ ಸರ್ಕಾರದ ಈ ಕ್ರಮ ಭಾರೀ ಪ್ರಾಮುಖ್ಯತೆ ಪಡೆದುಕೊಂಡಿದೆ.
ತಮ್ಮ ಸಚಿವಾಲಯವು ಕತುವಾ, ಉನ್ನಾವೊ ಮತ್ತು ಇತ್ತೀಚಿನ ಇಂಥ ಎಲ್ಲ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪೆÇೀಕ್ಸೊ ಕಾಯ್ದೆಗೆ ತಿದ್ದುಪಡಿಗಳನ್ನು ಮಾಡಿ, 12 ವರ್ಷಗಳ ಕೆಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಲಾಗುವುದು. ಈ ಸಂಬಂಧ ಏ.16ರಂದು ಸಂಪುಟ ಟಿಪ್ಪಣಿ ಹೊರಡಿಸಲಾಗುವುದು ಎಂದು ಹೇಳಿದ್ದರು.
ಈ ಮೂಲಕ ಕಾಮುಕರಿಗೆ ಭಯ ಮತ್ತು ಎಚ್ಚರಿಕೆಯ ಸಂದೇಶ ರವಾನಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆÉ.