ವಿ ಆರ್ ಎಲ್ ಬಸ್ ನಲ್ಲಿ ಬೆಂಕಿ ಅವಘಡ: ಚಾಲಕನ ಸಮಯ ಪ್ರಜ್ನೆಯಿಂದ ಪ್ರಯಾಣಿಕರು ಪಾರು

ಕೊಪ್ಪಳ:ಏ-21:ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಿಆರ್‌ಎಲ್‌ ಸಂಸ್ಥೆಯ ಬಸ್‌ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.‌ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದ್ದು, ಬಸ್‌ ಸಂಪೂರ್ಣ ಸುಟ್ಟು ಕರಕಲಾಗಿದೆ.

ಕೊಪ್ಪಳದ ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಬೆಂಗಳೂರಿನಿಂದ ವಿಜಯಪುರಕ್ಕೆ ಬಸ್ ಸಂಚರಿಸುತ್ತಿತ್ತು. ಗುನ್ನಾಳ ಕ್ರಾಸ್ ಬಳಿ ಏಕಾಏಕಿ ಬ್ಯಾಟರಿಯಲ್ಲಿ ಶಾರ್ಟ್ ಸರ್ಕೀಟ್‌ ಸಂಭವಿಸಿದೆ. ಕೂಡಲೇ ಅಪಾಯದ ಮುನ್ಸೂಚನೆ ಅರಿತ ಚಾಲಕ ಬಸ್ ನಿಲ್ಲಿಸಿದ್ದಾರೆ. ಬಸ್ ಸಿಬ್ಬಂದಿ ಪ್ರಯಾಣಿಕರು ಹಾಗೂ ಲಗೇಜ್‌ನ್ನು ಕೆಳಗೆ ಇಳಿಸಿದ್ದಾರೆ.

 

ಚಾಲಕನ ಸಮಯಪ್ರಜ್ನೆಯಿಂದ ಬಸ್‌ನಲ್ಲಿದ್ದ 32 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಕುಷ್ಟಗಿ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ‌‌ ನಂದಿಸಲು ಪ್ರಯತ್ನಿಸಿದ್ದಾರೆ. ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

koppala,National Highway 50, VRL bus,Fire, passengers escape

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ