ಮೈಸೂರು, ಏ.21-ಸ್ವಪಕ್ಷದ ಸ್ಥಳೀಯ ಮುಖಂಡರ ತೀವ್ರ ವಿರೋಧದ ನಡುವೆ ಮಾಜಿ ಸಚಿವ ಎಸ್.ಎ.ರಾಮದಾಸ್ ಮೈಸೂರು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ನಗರದ ವಿದ್ಯಾರಣ್ಯಪುರದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಮೆರವಣಿಗೆ ಮೂಲಕ ಮೈಸೂರು ಮಹಾನಗರ ಪಾಲಿಕೆಗೆ ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು.
ರಾಮದಾಸ್ಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದೆಂದು ಪಕ್ಷದ ಹಲವು ಮುಖಂಡರು ಒತ್ತಾಯ ಮಾಡಿದ್ದರು. ರಾಮದಾಸ್ ಹೊರತು ಪಡಿಸಿ ಬೇರೆಯಾರಿಗಾದರೂ ಟಿಕೆಟ್ ನೀಡಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂಧನ್ ಒತ್ತಾಯಿಸಿದ್ದರು. ಆದರೂ ಸ್ಥಳೀಯ ಮುಖಂಡರ ವಿರೋಧದದ ನಡುವೆಯೂ ಹೈಕಮಾಂಡ್ ಟಿಕಟ್ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಈ ನಡುವೆ ಮತ್ತೊಬ್ಬ ಕೆ.ಆರ್.ಕ್ಷೇತ್ರ ಬಿಜೆಪಿ ಅಭ್ಯರ್ಥಿ ರಾಜೀವ ಅವರು ಇಂದು ಹಲವು ಸ್ಥಳೀಯ ಮುಖಂಡರೊಂದಿಗೆ ಮುಂದಿನ ನಡೆ ಬಗ್ಗೆ ಸಭೆ ನಡೆಸಿದರು.
ಜೆಡಿಎಸ ನಾಮಪತ್ರ: ಇದೇ ಸಂಧರ್ಭದಲ್ಲಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ಲಾ ಅವರು ಇಂದು ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.