ಜಾತಿಗಳನ್ನು ಒಡೆದಾಳುವ ಸಿದ್ದಾಂತದಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ – ನಿವೃತ್ತ ಪೆÇಲೀಸ್ ಅಧಿಕಾರಿ ರೇವಣ್ಣ ಸಿದ್ದಯ್ಯ

ಮೈಸೂರು,ಏ.22- ಜಾತಿಗಳನ್ನು ಒಡೆದಾಳುವ ಸಿದ್ದಾಂತದಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಾಂಗ್ರೆಸ್ ಮುಖಂಡ , ನಿವೃತ್ತ ಪೆÇಲೀಸ್ ಅಧಿಕಾರಿ ರೇವಣ್ಣ ಸಿದ್ದಯ್ಯ ಇಂದಿಲ್ಲಿ ತಿಳಿಸಿದರು.
ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಡೆಸುತ್ತಿರುವ ಕ್ಷುದ್ರ ರಾಜಕೀಯವನ್ನು ಖಂಡಿಸಿ ಅವರ ವಿರುದ್ಧ ಮತ ಪ್ರಚಾರ ಮಾಡಲು ಮುಂದಾಗಿದ್ದೇನೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಬೇರೆ ಪಕ್ಷವನ್ನು ಸೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ವರುಣಾ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಉತ್ತಮ ಅಭ್ಯರ್ಥಿ ಪರ ಪ್ರಚಾರ ಮಾಡುತ್ತೇನೆ. ಈಗ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿರುವ ಜಿ.ಟಿ.ದೇವೇಗೌಡ ಅವರ ಪರ ಪ್ರಚಾರ ಮಾಡಲಿದ್ದು , ಸಿದ್ದರಾಮಯ್ಯನವರಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದರು.
ಸಿದ್ದರಾಮಯ್ಯನವರು ಈವರೆಗೂ ನನಗೆ ಹಲವು ಆಶ್ವಾಸನೆಗಳನ್ನು ನೀಡಿದ್ದಾರೆ. ಅದಾವುದನ್ನು ಅವರು ಈಡೇರಿಸಿಲ್ಲ. ನನ್ನನ್ನು ತುಳಿಯುವ ಕೆಲಸವನ್ನು ಮಾಡಿದ್ದಾರೆ. ಕಳೆದ ಎರಡು ಬಾರಿ ನೀಡಿದ ಆಶ್ವಾಸನೆಯೇ ಈಡೇರಿಸಿಲ್ಲ. ಈ ಬಾರಿಯೂ ಸಹ ಹಲವು ಆಶ್ವಾಸನೆ ನೀಡಿದ್ದರು. ಆದರೆ ನಾನು ಆ ಬಗ್ಗೆ ಚಿಂತನೆ ನಡೆಸಿ ಕಾಂಗ್ರೆಸ್‍ನಿಂದ ಹೊರ ಹೋಗುತ್ತಿದ್ದೇನೆ ಎಂದು ಹೇಳಿದರು.
ಈಗಾಗಲೇ ಒಂದು ಜಾತಿಯನ್ನು ಸಿದ್ದರಾಮಯ್ಯ ಒಡೆದಿದ್ದಾರೆ. ಮತ್ತೊಂದು ಜಾತಿಯನ್ನು ಒಡೆಯಲು ಮುಂದಾಗಿದ್ದಾರೆ. ಹಾಗಾಗಿ ಜಾತಿ ಒಡೆದಾಳುವವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದ ಅವರು, ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರಗಳಲ್ಲಿ ಈ ಬಗ್ಗೆ ಮತದಾರರಿಗೆ ಅರಿವು ಮೂಡಿಸಿ ಅವರನ್ನು ಸೋಲಿಸಲು ಮುಂದಾಗುತ್ತೇನೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ