ಕ್ರಿಕೆಟ್ ಬೆಟ್ಟಿಂಗ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿ 1.10 ಲಕ್ಷ ರೂ. ನಗದು ಹಾಗೂ 4 ಮೊಬೈಲ್ ವಶ

ಬೆಂಗಳೂರು, ಏ.23- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿ 1.10 ಲಕ್ಷ ರೂ. ನಗದು ಹಾಗೂ 4 ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಹನುಮಂತನಗರದ ಅಕ್ಷಯ್‍ಕುಮಾರ್ (25) ಮತ್ತು ವಿಜಯನಗರದ ಗೌತಮ್ ಜೈನ್ (24) ಬಂಧಿತರು.

ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಗಿರಿ ನಗರದ 12ನೆ ಕ್ರಾಸ್‍ನ ಅನುಗ್ರಹ ನಿಲಯದ 3ನೆ ಮಹಡಿಯಲ್ಲಿನ ಕೊಠಡಿಯೊಂದರಲ್ಲಿ ಐಪಿಎಲ್ ಟಿ 20 ಕ್ರಿಕೆಟ್ ಪಂದ್ಯಕ್ಕೆ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಜೂಜಾಡುತ್ತಿದ್ದ ಬಗ್ಗೆ ಸಿಸಿಬಿ ಪೆÇಲೀಸರಿಗೆ ಮಾಹಿತಿ ಲಭಿಸಿದೆ.
ಈ ನಿಟ್ಟಿನಲ್ಲಿ ಕಾರ್ಯ ನಿರತರಾದ ಸಿಸಿಬಿ ಪೆÇಲೀಸರು ಮನೆ ಮೇಲೆ ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು 1.10 ಲಕ್ಷ ರೂ. ಹಣ , 4 ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬ್ಯಾಟರಾಯನಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ