ಹೊಳೆನರಸೀಪುರ,ಏ.28-ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಅರೋಪಿದಲ್ಲಿ ಇಬ್ಬರು ಆರ್ಟಿಒ ಅಧಿಕಾರಿಗಳನ್ನು ಕಡ್ಡಾಯ ರಜೆ ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಮೇಲೆ ತೆರಳುವಂತೆ ಸಾರಿಗೆ ಆಯುಕ್ತರು ಆದೇಶಿಸಿದ್ದಾರೆ.
ವಿಜಯಪುರ ಮೂಲದ ಆರ್ಟಿಒ ಅಧಿಕಾರಿಗಳಾದ ಸಿ.ಎಂ.ಕೃಷ್ಣೇಗೌಡ ಮತ್ತು ವಿ.ಪಿ.ರಮೇಶ್ ಅವರುಗಳಿಗೆ ಕಡ್ಡಾಯ ರಜೆ ನೀಡಿ ಮನೆಗೆ ಕಳುಹಿಸಲಾಗಿದೆ.
ಈ ಇಬ್ಬರು ಅಧಿಕಾರಿಗಳು ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜೇಗೌಡ ಅವರ ಪರವಾಗಿ ಖುದ್ದು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಾರಿಗೆ ಆಯುಕ್ತರಿಗೆ ದೂರು ನೀಡಿದ್ದರು.
ದೂರನ್ನು ಗಂಭೀರವಾಗಿ ಪರಿಗಣಿಸಿದ ಸಾರಿಗೆ ಆಯುಕ್ತರು ಇಬ್ಬರು ಆರ್ಟಿಒ ಅಧಿಕಾರಿಗಳಿಗೆ ಕಡ್ಡಾಯ ರಜೆಯ ಶಿಕ್ಷೆ ನೀಡಿದ್ದಾರೆ.