ತುಮಕೂರು,ಏ.29- ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಮರುಕ್ಷಣವೇ ಬಡವರಿಗೆ ಉಚಿತವಾಗಿ ಅಕ್ಕಿ ವಿತರಣೆ ಮತ್ತು ರೈತರ ಸಾಲ ಮನ್ನಾ ಮಾಡಿದ ಏಕೈಕ ವ್ಯಕ್ತಿ ಎಂದು ನಟಿ ಜಯಮಾಲಾ ಹೇಳಿದರು.
ತುಮಕೂರು ನಗರದ ಖಾಸಗಿ ಹೋಟೆಲ್‍ನಲ್ಲಿ ಮಾತನಾಡಿದ ಅವರು, ಈ ದೇಶದಲ್ಲಿ ಯಾರು ಕೂಡ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡಿರಲಿಲ್ಲ. ಆದರೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಅವರು ಸಂವಿಧಾನವನ್ನು ಬದಲಾಯಿಸಲು ಬಂದಿದ್ದೇವೆ ಎಂದು ನರೇಂದ್ರ ಮೋದಿ ಅವರು ಅನಂತಕುಮಾರ್ ಹೆಗಡೆ ಮೂಲಕ ಹೇಳಿಸಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದು ಸಾಧ್ಯವಿಲ್ಲ ಎಂದರು.
ಲೋಕಾಯುಕ್ತವನ್ನು ದುರ್ಬಲಗೊಳಿಸಿ ಎಸಿಬಿಯನ್ನು ರಚಿಸಿದರು ಎಂಬುದು ಆಧಾರ ರಹಿತ ಆರೋಪವಾಗಿದೆ. ದೇಶದಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಆದರೆ ಇಡೀ ರಾಷ್ಟ್ರದಲ್ಲೇ ಕರ್ನಾಟಕ ಮಾದರಿ ರಾಜ್ಯವನ್ನಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ರಾಜ್ಯದ ಜನತೆ ಮತ್ತೆ ಕಾಂಗ್ರೆಸ್‍ಗೆ ಬೆಂಬಲಿಸುವಂತೆ ಮನವಿ ಮಾಡಿದರು.
ಸಾಹಿತಿ ಮರಳ ಸಿದ್ದಪ್ಪ ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಕೋಮು ದಳ್ಳುರಿ ಹೆಚ್ಚಾಗುವಂತೆ ಬಿಜೆಪಿಯವರು ಮಾಡಿದರು. ಕರ್ನಾಟಕದಲ್ಲಿ ನಡೆಯುವ ಚುನಾವಣೆ ರಾಷ್ಟ್ರಮಟ್ಟದಲ್ಲೇ ಅತ್ಯಂತ ಮಹತ್ವ ಪಡೆದುಕೊಂಡಿದೆ. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಚುನಾವಣೆ ಬರುತ್ತಿದೆ. ಅಲ್ಲದೆ ಒಂದು ವರ್ಷದಲ್ಲಿ ಲೋಕಸಭೆ ಚುನಾವಣೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ಅತ್ಯಂತ ಮಹತ್ವ ಪಡೆದಿದೆ ಎಂದರು.
ದಿನೇಶ್ ಅಮಿನ್‍ಮಟ್ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಎಲ್ಲಿ ಹದಗೆಟ್ಟಿದೆ ಎಂಬುದನ್ನು ಆರೋಪ ಮಾಡುವವರನ್ನೇ ಕೇಳಿ ಎಂದರು.