ಮಂಗಳೂರು:ಫೆ-20: ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮೂರು ದಿನಗಳ ಕರಾವಳಿ ಪ್ರವಾಸ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಶಾ ಇಂದು ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
ಸುಬ್ರಹ್ಮಣ್ಯ ದೇವರ ದರ್ಶನದ ಬಳಿಕ ಶ್ರೀ ಸಂಪುಟ ನರಸಿಂಹಸ್ವಾಮಿ ಮಠದ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ಬಳಿಯಿರುವ ಕುಲ್ಕುಂದದಲ್ಲಿ ನವಶಕ್ತಿ ಸಮಾವೇಶದಲ್ಲಿ ಪಾಲ್ಗೊಂಡು ಕರಾವಳಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದರು.
ಇನ್ನು ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಜ್ವರದಿಂದ ಬಳಲುತ್ತಿದ್ದು, ವೈದ್ಯರು ತಪಾಸಣೆ ಮಾಡಿದ್ದಾರೆ. ಇಂದಿನ ಕಾರ್ಯಕ್ರಮಗಳಲ್ಲಿ ಕುಳಿತು ಮಾತನಾಡುವಂತೆ ಶಾ ಅವರಿಗೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
Amit Shah,kukke subramanya temple,Karnataka,Election Campaign