ಬೈಕ್ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಯುವಕರು ಸ್ಥಳದಲ್ಲೇ ಮೃತ:

ಮಳವಳ್ಳಿ, ಮೇ 2- ಬೈಕ್ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಕವಾಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಂದಾನಿ (18) ಮತ್ತು ಸಿದ್ದರಾಜು (19) ಮೃತಪಟ್ಟ ಯುವಕರು.
ತಾಲ್ಲೂಕಿನ ತಮ್ಮಡಹಳ್ಳಿಯ ಕೊಂಡದಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹಿಂದಿರುಗುತ್ತಿದ್ದಾಗ ಶಿಂಷಾ ಬಳಿ ಬೈಕ್ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಬೆಳಕವಾಡಿ ಪೆÇಲೀಸರು ಪ್ರಕರಣ ದಾಖಲು ಮಾಡಿಕೊಂಡು, ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಮೃತದೇಹ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ