ಬೆಂಗಳೂರು, ಮೇ 2-ವಿಧಾನಸಭೆ ಚುನಾವಣೆಯಲ್ಲಿ ಜಾತ್ಯತೀತ ನಿಲುವು ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ನಿರ್ಣಯವನ್ನು ಸಂಯುಕ್ತ ಜನತಾದಳ ಕೈಗೊಂಡಿದೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಎಂ.ಪಿ.ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಅಶ್ವಥ್ನಾರಾಯಣ ತಿಳಿಸಿದ್ದಾರೆ.
ಪಕ್ಷದ ಹಿರಿಯ ಮುಖಂಡ ಶರದ್ ಯಾದವ್ ನೇತೃತ್ವದ ಕಾರ್ಯಕರ್ತರ ಸಭೆ ನಡೆಸಿ ಕೋಮುವಾದಿ ಬಿಜೆಪಿಯನ್ನು ದೂರವಿಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ನಾಲ್ಕು ವರ್ಷ ಕಳೆದರೂ ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಿದ ಅಂಶಗಳನ್ನು ಈಡೇರಿಸಿಲ್ಲ. ದೇಶದಲ್ಲಿ ಜಾತ್ಯತೀತ ಪಕ್ಷಗಳು ಒಂದಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.