ಕೃಷ್ಣರಾಜ ಕ್ಷೇತ್ರದ ಜನತೆ ತಮ್ಮನ್ನು ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಲಿದ್ದಾರೆ

ಮೈಸೂರು,ಮೇ4- ಈ ಬಾರಿಯ ಚುನಾವಣೆಯಲ್ಲಿ ಕೃಷ್ಣರಾಜ ಕ್ಷೇತ್ರದ ಜನತೆ ತಮ್ಮನ್ನು ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಬಿಜೆಪಿ ಅಭ್ಯರ್ಥಿ ರಾಮ್‍ದಾಸ್ ತಿಳಿಸಿದ್ದಾರೆ.

ಇಂದು ಬೆಳಗ್ಗೆ ನಗರದ 65ನೇ ವಾರ್ಡ್‍ನಲ್ಲಿ ಪ್ರಚಾರ ನಡೆಸಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ರಾಮ್‍ದಾಸ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ನಾಳೆ ಮೈಸೂರಿಗೆ ಆಗಮಿಸಲಿದ್ದು, ಬೂತಾಳೆ ಪಿಚ್‍ನಲ್ಲಿ ಸಂಜೆ 7 ಗಂಟೆಗೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಸಾರ್ವಜನಿಕ ಸಭೆಗೂ ಮುನ್ನ ನಾರಾಯಣಶಾಸ್ತ್ರಯಿಂದ ವಿದ್ಯಾರಣ್ಯಾಪುರವರೆಗೂ 10 ಸಾವಿರ ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ