ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರ ಕಾರನ್ನು ತಡೆದು ಪ್ರತಿಭಟನೆ

ಮೈಸೂರು, ಮೇ 6- ನಾಗನಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯರು ಅವರ ಕಾರನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ನಾಗನಹಳ್ಳಿಯಲ್ಲಿ ನಿನ್ನೆ ದರ್ಶನ್ ಪ್ರಚಾರದ ನಂತರ ರಾತ್ರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರು ಸ್ಥಳಕ್ಕೆ ತೆರಳುತ್ತಿದ್ದಾಗ ಅವರ ಕಾರನ್ನು ತಡೆದ ಮಹಿಳೆಯರು ನಿಮ್ಮ ಕುಮ್ಮಕ್ಕಿನಿಂದಲೇ ಇದೆಲ್ಲ ನಡೆದಿದೆ ಎಂದು ಆರೋಪಿಸಿದ್ದಾರೆ.

ಈ ವೇಳೆ ಮಹಿಳೆಯರು ಮತ್ತು ಜಿ.ಟಿ.ದೇವೇಗೌಡರ ನಡುವೆ ವಾಗ್ವಾದ ನಡೆದಿದೆ. ಪರಿಸ್ಥಿತಿಯ ಗಂಭೀರತೆ ಅರಿತ ಪೆÇಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ