ಇನ್ನು ಆರು ದಿನದಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ

ಕೊಪ್ಪಳ:ಮೇ-7: ಇನ್ನು ಕೇವಲ ಆರು ದಿನದಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ. ಮನೆಗೆ ಹೋಗುವವರ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.ಸಿದ್ದರಾಮಯ್ಯನಿಗ ಯೋಗ್ಯತೆ ಇದ್ದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ ಮಾಡಬೇಕಿತ್ತು.ಆದರೆ, ಬಾದಾಮಿಗೆ ಯಾಕೆ ಬಂದು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸೋಲು ನಿಶ್ಚಿತ.

ನಾನು ಗೆಲ್ಲುತ್ತೇನೆ, ನಾನೇ ದಂಡನಾಯಕ ಎಂದು ಸಿದ್ದರಾಮಯ್ಯ ಹೇಳುತ್ತಿರುವ ಕುರಿತಂತೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು ಮೊದಲು ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಾ. ಜಿ. ಪರಮೇಶ್ವರ್ ಒಂದೇ ವೇದಿಕೆಯಲ್ಲಿ ಬಂದು ಕುಳಿತುಕೊಳ್ಳಲಿ. ಆಮೇಲೆ ಅವರು ತಮ್ಮ ಗೆಲುವಿನ ಬಗ್ಗೆ ಮಾತನಾಡಲಿ ಎಂದರು.

ಅಲ್ಲದೆ, ಇನ್ನು ಪ್ರಧಾನಿ ನರೇಂದ್ರ ಮೋದಿ ವಿದೂಷಕರಿದ್ದಂತೆ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ ಯಡಿಯೂರಪ್ಪ ಈ ಬಾರಿ 20 ಸ್ಥಾನದಲ್ಲಿಯೂ ಗೆಲ್ಲದವರ ಬಗೆಗಿನ ಪ್ರಶ್ನೆಗೆ ನಾನು ಉತ್ತರಿಸುವುದಿಲ್ಲ ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ