ಜಿಲ್ಲಾ ಚುನಾವಣಾಧಿಕಾರಿ ಕಚೇರಿ ವ್ಯಾಪ್ತಿಯಲ್ಲೇ ಹಣ ಹಂಚಿಕೆ:

ಚಾಮರಾಜನಗರ, ಮೇ 9-ಜಿಲ್ಲಾ ಚುನಾವಣಾಧಿಕಾರಿ ಕಚೇರಿ ವ್ಯಾಪ್ತಿಯಲ್ಲೇ ಹಣ ಹಂಚಿಕೆ ಸಂಬಂಧದ ದೂರು ಆಧರಿಸಿ ವ್ಯಕ್ತಿಯೊಬ್ಬರನ್ನು ವಿಚಕ್ಷಣ ದಳದವರು ಪತ್ತೆ ಮಾಡಿ ಪಟ್ಟಣ ಠಾಣೆ ಪೆÇಲೀಸರ ವಶಕ್ಕೆ ನೀಡಿದ್ದಾರೆ.
ಸರ್ಕಾರಿ ನೌಕರರ ಅಂಚೆ ಮತದಾನದ ವೇಳೆ ಹಣ ಹಂಚುತ್ತಿದ್ದ ಪ್ರಸಾದ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.  ಚಾಮರಾಜನಗರ ಜಿಲ್ಲಾಡಳಿತ ಭವನದ ಮುಖ್ಯ ಚುನಾವಣಾಧಿಕಾರಿ ಕಚೇರಿ ವ್ಯಾಪ್ತಿಗೆ ಹೊಂದಿಕೊಂಡಂತಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ವ್ಯಕ್ತಿಯೊಬ್ಬರು ಹಣ ಹಂಚುತ್ತಿದ್ದ ಬಗ್ಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ವಿಚಕ್ಷಣ ದಳದ ಅಧಿಕಾರಿಗಳು ವ್ಯಕ್ತಿಯನ್ನು ವಶಕ್ಕೆ ಪಡೆದರು. ಇಂದು ಸರ್ಕಾರಿ ನೌಕರರಿಗಾಗಿ ಅಂಚೆ ಮತದಾನ ಮಾಡುವ ಸೌಕರ್ಯ ಕಲ್ಪಿಸಲಾಗಿತ್ತು. ಮತದಾನ ಕೇಂದ್ರದಲ್ಲಿಯೇ ಹಣ ಹಂಚುತ್ತಿದ್ದ ಆರೋಪದ ಮೇರೆಗೆ ದೂರು ದಾಖಲಿಸಲಾಗಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ವಿಚಕ್ಷಣ ದಳದವರು ಶೋಧ ನಡೆಸಿ ಪ್ರಸಾದ್‍ನನ್ನು ಬಂಧಿಸಿ ಆತನ ಬಳಿ ಇದ್ದ 2.8 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪಟ್ಟಣ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ