ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್. ನಗರದಲ್ಲಿ ಮುಂದುವರಿದ ರಾಜಕೀಯ ಸಂಘರ್ಷ ಮುಂದುವರಿದಿದೆ. ಮತದಾನದ ಹೊಸ್ತಿಲಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ.
ಇಬ್ಬರು ಜೆಡಿಎಸ್ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿರುವು ಘಟನೆ ಕೆ.ಆರ್.ನಗರ ತಾಲೂಕಿನ ಕಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ರಾತ್ರಿ ಪ್ರಚಾರ ಮಾಡುವ ವೇಳೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.
ಹಲ್ಲೆ ಖಂಡಿಸಿ ರಸ್ತೆ ತಡೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಸಾ.ರಾ.ಮಹೇಶ್ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ ಪುತ್ರ ಡಿ.ರವಿಶಂಕರ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ಪಕ್ಷೇತರ ಅಭ್ಯರ್ಥಿ ಮೇಲೆ ಹಲ್ಲೆ:
ಮೈಸೂರು: ಕಳೆದ ತಡರಾತ್ರಿ ಕೆ.ಆರ್.ನಗರದ ಹೊಸ ಅಗ್ರಹಾರದ ಬಳಿ ಮೈಸೂರು ಜಿಲ್ಲೆ ಕೆ.ಆರ್.ನಗರ ಪಕ್ಷೇತರ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಕಣ್ಣಿಗೆ ಖಾರದ ಪುಡಿ ಎರಚಿ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದ್ದು, ತೀವ್ರವಾಗಿ ಗಾಯಗೊಂಡ ಹೊಸಳ್ಳಿ ವೆಂಕಟೇಶ್ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜೆಪಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಹೊಸಳ್ಳಿ ವೆಂಕಟೇಶ್, ಬದಲಾದ ಕಾಲಘಟ್ಟದಲ್ಲಿ ಬಿಜೆಪಿಯಿಂದ ಮಹಿಳಾ ಮುಖಂಡೆಗೆ ಟಿಕೆಟ್ ನೀಡಲಾಗಿತ್ತು.
ನಿನ್ನೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ವೆಂಕಟೇಶ್. ನಿನ್ನೆ ತಡ ರಾತ್ರಿ ಇವರ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.