ಮತದಾರರಿಗೆ ಹಣ ಹಂಚಿಕೆ: ರಾಜಾಜಿನಗರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲು,ಓರ್ವನ ಬಂಧನ

ಬೆಂಗಳೂರು, ಮೇ 10- ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ಒಬ್ಬಾತನನ್ನು ಬಂಧಿಸಲಾಗಿದೆ.

ಚುನಾವಣಾಧಿಕಾರಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಮೂರು ಪ್ರಕರಣಗಳನ್ನು ರಾಜಾಜಿನಗರ ಠಾಣೆ ಪೆÇಲೀಸರು ದಾಖಲಿಸಿಕೊಂಡಿದ್ದಾರೆ.
ರಾಜಾಜಿನಗರದ 14ನೆ ಮುಖ್ಯರಸ್ತೆಯಲ್ಲಿ ಬಿಲ್ಡರ್‍ವೊಬ್ಬರ ಕಚೇರಿಯಿದ್ದು, ಮತದಾರರಿಗೆ ಇಲ್ಲಿ ಹಣ ಹಂಚುತ್ತಿದ್ದಾರೆಂಬ ದೂರಿನ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದಾಗ ಹಣ ಪತ್ತೆಯಾಗಿದೆ.

3.50 ಲಕ್ಷ ರೂ. ಹಣ ಸಾಗಣೆ ಮಾಡುತ್ತಿದ್ದ ಮಹೇಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೆÇಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಬಿಲ್ಡರ್ ಕಚೇರಿ ಮೇಲೆ ದಾಳಿ ಮಾಡಿದಾಗ ಕಚೇರಿಯಲ್ಲಿ 99 ಸಾವಿರ ರೂ. ಪತ್ತೆಯಾಗಿದೆ.
ಅಲ್ಲದೆ, ಯುವಕನೊಬ್ಬ ಬಿಸಾಡಿ ಹೋಗಿದ್ದ 1.38 ಲಕ್ಷ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೆÇಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ