ಹಾಸನ, ಮೇ 10- ಕೆಪಿಎಸ್ಸಿಯಲ್ಲಿ ನಡೆದಿರುವ ಅಕ್ರಮ ನೇಮಕಾತಿ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ಸಿ ಛೇರ್ಮನ್ ಶ್ಯಾಮ್ಭಟ್ ಅವರು ಒಬ್ಬೊಬ್ಬರಿಂದ 2 ಕೋಟಿ ವಸೂಲಿ ಮಾಡಿದ್ದಾರೆ. ತಹಸೀಲ್ದಾರ್ ಹುದ್ದೆಗೆ 1 ಕೋಟಿ ತೆಗೆದುಕೊಂಡಿದ್ದಾರೆ. ಈ ಹಣವನ್ನು ಕಾಂಗ್ರೆಸ್ ಸರ್ಕಾರಕ್ಕೆ ಕೊಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಸೀಟು ಹಂಚಿಕೆಯಲ್ಲಿ ಜಾತಿವಾರು ಅವ್ಯವಹಾರ ನಡೆದಿದೆ. ನಿವೃತ್ತ ಪೆÇಲೀಸ್ ಅಧಿಕಾರಿ ಕೆಂಪಯ್ಯ ಇದರಲ್ಲಿ ಶಾಮೀಲಾಗಿದ್ದಾರೆ. 460 ಹುದ್ದೆಗಳಿಗೆ ಸುಮಾರು 600 ಕೋಟಿ ಹಣ ವಸೂಲಿ ಮಾಡಿಕೊಡಲಾಗಿದ್ದು, ಈ ಹಣವನ್ನು ಚುನಾವಣೆಗೆ ಹಂಚಲಾಗುತ್ತಿದೆ. ಶ್ಯಾಮ್ಭಟ್ ಬಿಡಿಎ ಹಾಳು ಮಾಡಿ ಈಗ ಕೆಪಿಎಸ್ಸಿ ನಿರ್ನಾಮ ಮಾಡಲು ಹೊರಟಿದ್ದಾರೆ. ಅವರು ಈಗ ಮೈಸೂರಿನಲ್ಲಿ ಮೊಕ್ಕಾಂ ಹೂಡಿದ್ದಾರೆ. ಆದಾಯ ತೆರಿಗೆ ಇಲಾಖೆ ನಡೆಸಬೇಕು ಎಂದು ಒತ್ತಾಯಿಸಿದರು.
ನಮ್ಮ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸಾಗಣೆ ಎಗ್ಗಿಲ್ಲದೆ ನಡೆಯುತ್ತಿದೆ. ಹೊಳೆನರಸೀಪುರ ಮತದಾರರಿಗೆ ಆಮಿಷವೊಡ್ಡಲಾಗುತ್ತಿದೆ. ಇಲ್ಲಿನ ಚೆಕ್ಪೆÇೀಸ್ಟ್ಗಳು ನಾಮಕಾವಸ್ಥೆಗೆ ಕಾರ್ಯನಿರ್ವಹಿಸುತ್ತಿವೆ. ಕೂಡಲೇ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ನಿಗಾ ವಹಿಸಬೇಕು ಎಂದು ಹೇಳಿದರು.
ಜಿಲ್ಲೆಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ. ವಿಮಾನ ನಿಲ್ದಾಣ, ಐಐಟಿ ಸ್ಥಾಪನೆಯಾಗುವುದನ್ನು ತಪ್ಪಿಸಿದೆ. ಅದು ಯಾವ ಮುಖ ಇಟ್ಟುಕೊಂಡು ಇಲ್ಲಿಗೆ ಮತ ಕೇಳಲು ಬರುತ್ತಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಎಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.