ಹೊಸದಿಲ್ಲಿ,ಮೇ 11
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗಕ್ಕೆ ಶುಕ್ರವಾರ ದೂರು ಸಲ್ಲಿಸಿದೆ.
ಕಾಂಗ್ರೆಸ್ ಹಿರಿಯನಾಯಕರಾದ ಕಪಿಲ್ ಸಿಬಲ್ ಮತ್ತು ಮೋತಿಲಾಲ್ ವೋರಾ ಅವರು ಚುನಾವಣಾ ಆಯೋಗದ ಕೇಂದ್ರ ಕಚೇರಿಗಳಿಗೆ ದೂರು ಸಲ್ಲಿಸಿದ್ದಾರೆ.
ಇಬ್ಬರು ನಾಯಕರು ರಾಜ್ಯದಲ್ಲಿ ಚುನಾವಣಾ ಪ್ರಚಾರದ ವೇಳೆ ಪ್ರಚೋದನಕಾರಿ ಭಾಷಣ ಮಾಡಿ ಜನರಿಗೆ ತಪ್ಪು ಸಂದೇಶ ನೀಡಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನಿರಂತರ ಪ್ರಚಾರ ಸಭೆಗಳ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಚಾರ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು.