ನವದೆಹಲಿ, ಮೇ 11- ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೇನಗರ್ ಪಾತ್ರವನ್ನು ಸಿಬಿಐ ಖಚಿತಪಡಿಸಿದೆ.
ಕಳೆದ ವರ್ಷ ಜೂ.4ರಂದು ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮಗಳ(16) ಮೇಲೆಯೇ ಅತ್ಯಾಚಾರ ಎಸಗಿದ್ದ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದರೆಂದು ದೂರು ನೀಡಲಾಗಿತ್ತು.
ನ್ಯಾಯ ನೀಡುವಂತೆ ಆಗ್ರಹಿಸಿ ಯುವತಿಯ ತಂದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನೆಮುಂದೆ ವಿಷಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಈ ಸಂದರ್ಭದಲ್ಲಿ ಅವರನ್ನು ಪೆÇಲಿಸರು ಬಂಧಿಸಿದ್ದರು. ಆದರೆ ಅವರು ಪೆÇಲೀಸ್ ಠಾಣೆಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು.
ಪ್ರಕರಣದಲ್ಲಿ ತಮ್ಮ ಪಕ್ಷದ ಶಾಸಕನ ಹೆಸರು ತಳುಕು ಹಾಕಿಕೊಂಡಿದ್ದರಿಂದ ಬಿಜೆಪಿ ಸರ್ಕಾರಕ್ಕೂ ಇರಿಸು ಮುರಿಸಾಗಿತ್ತು. ಪಾರದರ್ಶಕ ತನಿಖೆಗಾಗಿ ಯೋಗಿ ಆದಿತ್ಯನಾಥ್ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ವಿಚಾರಣೆ ಕೈಗೆತ್ತಿಕೊಂಡಿದ್ದ ಸಿಬಿಐ ಕುಲ್ದೀಪ್ ಸಿಂಗ್ ಅತ್ಯಾಚಾರ ಎಸಗಿದ್ದನ್ನು ಖಚಿತಪಡಿಸಿದೆ. ಅಲ್ಲದೆ ಉತ್ತರ ಪ್ರದೇಶ ಪೆÇಲೀಸರು ಶಾಸಕ ಮತ್ತು ಇತರ ಆರೋಪಿಗಳ ವಿರುದ್ಧ ಎಫ್‍ಐಆರ್ ಮತ್ತು ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೂ ಅವರನ್ನು ಬಂಧಿಸಿರಲಿಲ್ಲ ಮತ್ತು ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿರಲಿಲ್ಲ ಎಂದೂ ಸಿಬಿಐ ದೂರಿದೆ.
ಕುಲ್‍ದೀಪ್‍ನನ್ನು ಗಲ್ಲಿಗೇರಿಸಿ-ಸಂತ್ರಸ್ತೆ ಆಗ್ರಹ:
ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಶಾಸಕರ ಪಾತ್ರವಿದೆ ಎಂಬುದನ್ನು ಸಿಬಿಐ ಖಚಿತಪಡಿಸಿದ ಹಿನ್ನೆಲೆಯಲ್ಲಿ ಸಂತ್ರಸ್ತೆ, ಅತ್ಯಾಚಾರ ಎಸಗಿದಲ್ಲದೆ , ನನ್ನ ತಂದೆಯನ್ನು ಕೊಂದಿರುವ ಬಿಜೆಪಿ ಶಾಸಕ ಕುಲ್‍ದೀಪ್ ಸಿಂಗನನ್ನು ಗಲ್ಲಿಗೇರಿಸಿ ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಸಂತ್ರಸ್ತೆಯ ಚಿಕ್ಕಪ್ಪ, ನಮ್ಮ ಕುಟುಂಬಕ್ಕೆ ಭದ್ರತೆ ನೀಡಬೇಕೆಂದು ನಾವು ಸರ್ಕಾರವನ್ನು ಮನವಿ ಮಾಡಿದ್ದು, ಕುಲ್‍ದೀಪ್‍ಗೆ ಮರಣದಂಡನೆ ವಿಧಿಸಬೇಕೆಂದು ಕೋರಿದ್ದಾರೆ.