ವಿಧಾನಸಭೆ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮೋದಿ ರಾಜ್ಯದ ಜನತೆಗೆ ಕರೆ:

ನವದೆಹಲಿ, ಮೇ 12-ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.
ಮತದಾರರು ಮನೆಗಳಿಂದ ಹೊರ ಬಂದು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಬೇಕು. ನನ್ನ ಸಹೋದರರು ಮತ್ತು ಸಹೋದರಿಯರು ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕುಗಳನ್ನು ಚಲಾಯಿಸಬೇಕು ಎಂದು ನಾನು ಮನವಿ ಮಾಡುತ್ತೇನೆ. ಅದರಲ್ಲೂ ವಿಶೇಷವಾಗಿ ಯುವ ಜನತೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಆ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಮೃದ್ಧಗೊಳಿಸಬೇಕು ಎಂದು ಪ್ರಧಾನಿ ಟ್ವಿಟ್ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ