ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಕ್ಷದ ಸ್ವಾರ್ಥವೇ ಕಾರಣ – ಡ್ಯಾನಿಷ್ ಅಲಿ

ನವದೆಹಲಿ, ಮೇ 15-ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಕ್ಷದ ಸ್ವಾರ್ಥವೇ ಕಾರಣ ಎಂದು ಜಾತ್ಯತೀತ ಜನತಾ ದಳ (ಜೆಡಿಎಸ್) ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಆರೋಪಿಸಿದ್ಧಾರೆ.
ಕಾಂಗ್ರೆಸ್ ಪಕ್ಷವು ಮೊದಲಿನಿಂದಲೂ ಜಾತ್ಯತೀಯ ಪ್ರಾದೇಶಿಕ ಪಕ್ಷಗಳನ್ನು ಮೂಲೆಗುಂಪು ಮಾಡುತ್ತಲೇ ಬಂದಿದೆ. ಅದರ ಪರಿಣಾಮವಾಗಿ ಈಗ ಬಿಜೆಪಿ ಪಕ್ಷ ಅಡಳಿತಕ್ಕೆ ಬರುವಂತಾಗಿದೆ ಎಂದು ಅವರು ಟೀಕಿಸಿದರು.
ಕರ್ನಾಟಕ ರಾಜ್ಯ ಚುನಾವಣಾ Àಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಇಂದಿನ ಈ ಪರಿಸ್ಥಿತಿಗೆ ಕಾಂಗ್ರೆಸ್ ನೇರ ಕಾರಣ ಎಂದು ಆಪಾದಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ