ನವದೆಹಲಿ, ಮೇ 20-ಪೆಟ್ರೋಲ್ ಮತ್ತು ಡೀಸೆಲ್ ದರ ಇಂದು ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 76.24 ರೂ.ಗಳಿಗೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದರೂ ಡೀಸೆಲ್ ಲೀಟರ್ಗೆ 67.57ರಷ್ಟು ಹೆಚ್ಚಳವಾಗಿದ್ದು, ಇದು ಅತ್ಯಧಿಕ ಪ್ರಮಾಣವಾಗಿದೆ.
ಗ್ರಾಹಕರಿಗೆ ಅಂತಾರಾಷ್ಟ್ರೀಯ ತೈಲ ಬೆಲೆಗಳಲ್ಲಿ ನಾಲ್ಕು ವಾರಗಳಿಂದ ಸತತ ಏರಿಕೆಯಾಗುತ್ತಿರುವುದರಿಂದ ಸಾರ್ವಜನಿಕ ವಲಯದ ತೈಲ ಸಂಸ್ಥೆಗಳು ಆ ಹೊರೆಯನ್ನು ಗ್ರಾಹಕರ ಮೇಲೆ ಹಾಕುವಂತಾಗಿದೆ.
ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್ಗೆ 33 ಪೈಸೆಗಳಷ್ಟು ಹೆಚ್ಚಾಗಿದೆ. ಇದು 2017ರ ಜೂನ್ ಮಧ್ಯದಲ್ಲಿ ಜಾರಿಗೆ ಬಂದ ದೈನಂದಿನ ಪರಿಷ್ಕರಣೆಯಾದಾಗಿನಿಂದ ಇದು ಅತ್ಯಧಿಕ ಗರಿಷ್ಠ ದರವಾಗಿದೆ. ಡೀಸೆಲ್ ದರದಲ್ಲಿ 26 ಪೈಸೆಗಳಷ್ಟು ಹೆಚ್ಚಾಗಿದೆ ಎಂದು ರಾಜ್ಯ ಸರ್ಕಾರ ಸ್ವಾಮ್ಯದ ತೈಲ ಸಂಸ್ಥೆಗಳ ಅಧಿಕೃತ ಪ್ರಕಟಣೆ ತಿಳಿಸಿದೆ.
ಸ್ಥಳೀಯ ಮಾರಾಟ ತೆರಿಗೆ ಅಥವಾ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ಇಂಧನ ಬೆಲೆ ಏರಿಕೆಯಲ್ಲಿ ವ್ಯತ್ಯಾಸವಾಗಲಿದೆ.