ಅಗ್ನೇಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಪ್ರಕ್ರಿಯೆಗಳು ಪ್ರಾರಂಭ:

ಕೋಲಾರ, ಮೇ 21- ವಿಧಾನ ಸಭಾ ಚುನಾವಣೆ ಭರಾಟೆ ಮುಗಿಯುತ್ತಿದ್ದಂತೆ ಇದೀಗ ಅಗ್ನೇಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಪ್ರಕ್ರಿಯೆಗಳು ಪ್ರಾರಂಭಗೊಂಡಿದೆ.
ಕೋಲಾರ,ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಜಿಲ್ಲೆಯ 32 ವಿಧಾನ ಸಭಾ ಕ್ಷೇತ್ರಗಳನ್ನೊಳಗೊಂಡತ್ತಿರುವ ಶಿಕ್ಷಕರ ಕ್ಷೇತ್ರದ ಶಿಕ್ಷಕರು ಈ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ.  ಚುನಾವಣಾ ಆಯೋಗವು ಈಗಾಗಲೇ ಅಧಿಸೂಚನೆ ಹೊರಡಿಸಿದ್ದು ಮೇ 22 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 23ರಂದು ಪರಿಶೀಲನೆ 25ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಜೂನ್ 8ರಂದು ಮತದಾನ ಬೆಳಿಗ್ಗೆ 8ರಿಂದ ಸಂಜೆ 4ಗಂಟೆವರೆಗೂ ನಡೆಯಲಿದೆ ಹಾಲಿ ಸದಸ್ಯ ಜೆಡಿಎಸ್ ರಮೇಶ್ ಬಾಬು ಮತ್ತೆ ಆಯ್ಕೆ ಬಯಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ