ರಾಮನಗರ: ಬಿಡದಿಯ ಇನ್ನೊವೇಟಿವ್ ಫಿಲ್ಮ್ ಸಿಟಿಯಲ್ಲಿ ಗುರುವಾರ ನಸುಕಿನ 3 ಗಂಟೆಯ ವೇಳೆಗೆ ಭಾರೀ ಅಗ್ನಿ ಅವಘಡ ಸಂಭವಸಿದೆ. ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್ಬಾಸ್ ಮನೆ ಹೊತ್ತಿ ಉರಿದಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಬಿಗ್ ಬಾಸ್ ಮನೆಯ ಪಕ್ಕದಲ್ಲಿರುವ ಮೇಣದ ಮ್ಯೂಸಿಯಂನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಮ್ಯೂಸಿಯಂ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬಿಗ್ ಬಾಸ್ ಮನೆಯ ಎಡಿಟಿಂಗ್ ರೂಮ್ಗೂ ಬೆಂಕಿ ವ್ಯಾಪಿಸಿಕೊಂಡಿದೆ.
ಸ್ಥಳಕ್ಕೆ 5 ಕ್ಕೂ ಹೆಚ್ಚು ವಾಹನಗಳೊಂದಿಗೆ ದೌಡಾಯಿಸಿರುವ ಅಗ್ನಿ ಶಾಮಕ ದಳದ ಸಿಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಅವಘಡದಿಂದ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.