ಚನ್ನಪಟ್ಟಣ, ಮೇ 26- ಸಾಲ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯ ಚಕ್ಕೆರೆ ಗ್ರಾಮದಲ್ಲಿ ನಡೆದಿದೆ.
ಅಪ್ಪಾಜಿಗೌಡ (45) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ತಮ್ಮ ಜಮೀನಿನಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೇಸಾಯಕ್ಕಾಗಿ ಬ್ಯಾಂಕ್-ಸೊಸೈಟಿ, ಸ್ತ್ರೀಶಕ್ತಿ ಸಂಘಗಳಲ್ಲಿ ಸಾಲ ಪಡೆದಿದ್ದಲ್ಲದೆ, ಕೆಲ ಮಂದಿಯಿಂದ ಕೈಸಾಲ ಮಾಡಿಕೊಂಡಿದ್ದರು. ಸಾಲಸೋಲ ಮಾಡಿ ಬೇಸಾಯ ಮಾಡಿದರೂ ಬೇಸಾಯ ಕೈಕೊಟ್ಟಿದ್ದರಿಂದ ಮಾನಸಿಕವಾಗಿ ನೊಂದಿದ್ದರು. ಬ್ಯಾಂಕ್, ಸೊಸೈಟಿ ಅಧಿಕಾರಿಗಳ ಕಾಟ ಹಾಗೂ ಕೈಸಾಲಗಾರರ ಉಪಟಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿಗೆ ಇವರೇ ಆಧಾರಸ್ತಂಭವಾಗಿದ್ದರು. ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.