ತುಮಕೂರು, ಮೇ 26- ಜಿಲ್ಲೆಯ ಪಾವಗಡದ ಶಿರಡಿ ಸಾಯಿ ರಾಮಮಂದಿರ ಹಾಗೂ ಶಿರಾದ ಯಲ್ಲಾಪುರದಮ್ಮ ದೇವಾಲಯದ ಬೀಗ ಮೀಟಿ ಒಳನುಗ್ಗಿದ ಚೋರರು ಹುಂಡಿಯಲ್ಲಿದ್ದ ಹಣ ಕಳವು ಮಾಡಿ ಪರಾರಿಯಾಗಿರುವ ಘಟನೆ ವರದಿಯಾಗಿದೆ.
ಪಾವಗಡ ಪಟ್ಟಣದ ಶ್ರೀನಿವಾಸನಗರದಲ್ಲಿರುವ ಸಾಯಿಬಾಬಾ ಮಂದಿರದ ಬೀಗ ಮುರಿದು ಒಳನುಗ್ಗಿದ ಚೋರರು ಹುಂಡಿಯಲ್ಲಿದ್ದ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯರು ದೇವಾಲಯದ ಮುಖ್ಯ ಬಾಗಿಲು ತೆರೆದಿರುವುದನ್ನು ಗಮನಿಸಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಕೂಡಲೇ ಪೆÇಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಪೆÇಲೀಸ್ ಠಾಣೆ ವ್ಯಾಪ್ತಿಯ ಯಲದಬಾಗಿ ಗ್ರಾಮದೇವತೆ ಯಲ್ಲಾಪುರದಮ್ಮ ದೇವಾಲಯದ ಹುಂಡಿಯನ್ನು ಸಹ ಕಳ್ಳರು ದೋಚಿಕೊಂಡು ಹೋಗಿದ್ದಾರೆ. ಎಷ್ಟು ಹಣ ಕಳ್ಳತನವಾಗಿದೆ ಎಂಬುದರ ಬಗ್ಗೆ ತಿಳಿದುಬಂದಿಲ್ಲ.