ಪಂಡಿತ್ ಜವಹರ್‍ಲಾಲ್ ನೆಹರು ಅವರ 54ನೇ ಪುಣ್ಯತಿಥಿ, ಗಣ್ಯಾತಿಗಣ್ಯರ ಶ್ರದ್ಧಾಂಜಲಿ

ನವದೆಹಲಿ, ಮೇ 27-ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಹರ್‍ಲಾಲ್ ನೆಹರು ಅವರ 54ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಸ್ವತಂತ್ರ ಭಾರತದ ಮೊದಲ ಪ್ರಧಾನಿ ನೆಹರು ಅವರ ಪುಣ್ಯಸ್ಮರಣೆ ಸಂದರ್ಭದಲ್ಲಿ ಮೋದಿ ಅವರು ಮೈಕ್ರೋಬ್ಲಾಗಿಂಗ್‍ನಲ್ಲಿ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ.
ದೆಹಲಿಯ ಶಾಂತಿ ವನದಲ್ಲಿರುವ ನೆಹರು ಸಮಾಧಿಗೆ ತೆರಳಿದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಸಮರ್ಪಿಸಿದರು.
ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯ ಪಾತ್ರ ವಹಿಸಿದ ನಂತರ ಪಂಡಿತ್ ನೆಹರು ಆಗಸ್ಟ್ 15, 1947ರಂದು ಪ್ರಧಾನಮಂತ್ರಿಯಾದರು. ಇವರನ್ನು ಆಧುನಿಕ ಭಾರತದ ಶಿಲ್ಪಿ ಎಂದು ಕರೆಯಲಾಗುತ್ತದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ