ಬೆಂಗಳೂರು, ಮೇ 27- ರೈತರ ಸಾಲಮನ್ನಕ್ಕೆ ಒತ್ತಾಯಿಸಿ ನಾಳೆ ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ನಗರದಲ್ಲಿ ಅವಕಾಶ ಕಲ್ಪಿಸಿಕೊಡುವುದಿಲ್ಲ ಎಂದು ನಗರ ಪೆÇಲೀಸ್ ಆಯುಕ್ತ ಟಿ.ಸುನಿಲ್‍ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಉಲ್ಲಂಘಿಸಿ ಬಂದ್ ಮಾಡಲು ಮುಂದಾದರೆ ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಉದ್ದೇಶಿತ ಬಂದ್ ತಡೆಗಟ್ಟುವಂತೆ ನಗರದ ಎಲ್ಲ ಡಿಸಿಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದೇನೆ ಎಂದು ಸುನಿಲ್‍ಕುಮಾರ್ ಹೇಳಿದರು.