ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ

ಮೈಸೂರು,ಮೇ 28-ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು , ಎಂದಿನಂತೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಗ್ರಹಾರದ ಅಂಗಡಿ ವ್ಯಾಪಾರಿಗಳಿಗೆ ಜೆಡಿಎಸ್ ಯುವ ಘಟಕ ಕಾರ್ಯಕರ್ತರು ಗುಲಾಬಿ ಹೂ ನೀಡಿದರು.
ಇಂದು ಬೆಳಗ್ಗೆಯಿಂದಲೇ ಬಿಜೆಪಿಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಆದರೆ ಪ್ರತಿಭಟನೆಗೆ ಯಾವುದೇ ಬೆಂಬಲ ವ್ಯಕ್ತವಾಗಲಿಲ್ಲ. ಬನ್ನಿಮಂಟಪದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ಪ್ರತಾಪ್ ಸಿಂಹ ಹಾಗೂ ಸಬರ್ ಬಸ್ ನಿಲ್ದಾಣದ ಬಳಿ ಶಾಸಕ ನಾಗೇಂದ್ರ ಹಾಗೂ ನಗರ ಬಸ್ ನಿಲ್ದಾಣದ ಬಳಿ ರಾಮ್‍ದಾಸ್ ಅವರು ಸರ್ಕಾರಿ ಬಸ್‍ಗಳನ್ನು ತಡೆಯಲು ಯತ್ನಿಸಿದಾಗ ಪೆÇಲೀಸರು ಇವರನ್ನು ವಶಕ್ಕೆ ಪಡೆದುಕೊಂಡರು.
ಇಂದು 6.30ರಿಂದಲೇ ಪ್ರತಿಭಟನೆ ಪ್ರಾರಂಭವಾದರೂ ಸಹ ಎಂದಿನಂತೆ ಬಸ್‍ಗಳು ಸಂಚರಿಸಿದವು. ಶಾಲಾಕಾಲೇಜುಗಳು, ಸಿನಿಮಾ ಥಿಯೇಟರ್‍ಗಳು ತೆರದಿದ್ದವು.
ಶಾಸಕರ ಬಂಧನ ಖಂಡಿಸಿ ಕಾರ್ಯಕರ್ತರು ಗಾಂಧಿವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಒಂದು ಕಡೆ ಬಿಜೆಪಿಯವರು ಪ್ರತಿಭಟನೆ ನಡೆಸಿದರೆ ತಮ್ಮ ಪಾಡಿಗೆ ತಾವು ವ್ಯಾಪಾರ-ವಹಿವಾಟು ನಡೆಸುತ್ತಿದ್ದ ವ್ಯಾಪಾರಸ್ಥರಿಗೆ ಜೆಡಿಎಸ್ ಯುವ ಘಟಕದ ಕಾರ್ಯಕರ್ತರು ಗುಲಾಬಿ ಹೂವು ನೀಡಿದ್ದು ವಿಶೇಷವಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ