ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯಿಂದ ಮೊದಲ ರೈತ ಸಭೆ

ಬೆಂಗಳೂರು, ಮೇ 30- ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ರೈತ ಸಭೆ ನಡೆಸಿ ಅಹವಾಲು ಸ್ವೀಕರಿಸಲು ಮುಂದಾಗಿರುವುದಕ್ಕೆ ತಾವು ಅಭಿನಂದನೆ ಸಲ್ಲಿಸುವುದಾಗಿ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡುವಂತೆಯೂ ರೈತರ ಪರವಾಗಿ ಅವರನ್ನು ಒತ್ತಾಯಿಸುತ್ತೇನೆ. ಎಲ್ಲರ ಬೆಂಬಲದೊಂದಿಗೆ ಈ ಹಿಂದೆ ಮಾತುಕೊಟ್ಟಂತೆ ರೈತರ ಸಮಸ್ಯೆಗೆ ಸ್ಪಂದಿಸಲು ಮೊದಲ ಆದ್ಯತೆಯಾಗಿ ಸಾಲ ಮನ್ನಾ ಮಾಡಲಿ ಎಂದರು.
ರಾಜ್ಯದಲ್ಲಿ ಮೂರವರೆ ಸಾವಿರಕ್ಕೂ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡರೂ ಕೇಂದ್ರದಿಂದ ಯಾವುದೇ ನೆರವು ಬಂದಿಲ್ಲ ಎಂದು ವಿಷಾದಿಸಿದರು.
ರೈತರ ಸಭೆಗೆ ವಿರೋಧ ಪಕ್ಷದ ನಾಯಕರನ್ನೂ ಆಹ್ವಾನಿಸಿದ್ದಾರೆ. ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಎಲ್ಲವನ್ನೂ ತೀರ್ಮಾನ ಮಾಡಲಿದ್ದಾರೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ