ಮೈಸೂರು,ಮೇ.31 ಹಿರಿಯ ಪತ್ರಕರ್ತ, ಮೈಸೂರು ಪತ್ರಿಕೆ ಸಂಪಾದಕರಾದ ಟಿ.ವೆಂಕಟರಾಮ್ ಅವರು ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತು.್ತ ನಗರದ ವಿದ್ಯಾರಣ್ಯಪುರಂ ನಲ್ಲಿರುವ ಸ್ವಗೃಹದಲ್ಲಿ ವೆಂಕಟರಾಮ್ ಅವರು ನಿನ್ನೆ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ,
ಪತ್ರಿಕಾ ರಂಗದಲ್ಲಿ ಇವರ ಸೇವೆಯನ್ನು ಗುರುತಿಸಿ ರಾಜೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಗೌರವಗಳು ಅವರಿಗೆ ಸಂದಿವೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸ್ಥಾಪನೆಯಲ್ಲಿ ಇವರು ಅತಿ ಮುಖ್ಯ ಪಾತ್ರ ವಹಿಸಿದ್ದವರೂ, ಪುತ್ರ ವೆಂಕಟಕೃಷ್ಣ ಹಾಗೂ ಮೊಮ್ಮಗ ಪತ್ರಿಕೆಯೊಂದರ ಛಾಯಾಗ್ರಾಹಕ ವಿ.ನಂದನ್ ಹಾಗೂ ಆರು ಮಂದಿ ಪುತ್ರಿಯರು ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.
ವೆಂಕಟರಾಮ್ ನಿಧನದ ನಂತರ ಅವರ ನೇತ್ರಗಳನ್ನು ಕೃಷ್ಣರಾಜೇಂದ್ರ ಆಸ್ಪತ್ರೆಗೆ ದಾನ ಮಾಡಲಾಯಿತು.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ವೆಂಕಟರಾಮ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವರಂಕಟರಾಮ್ ಅವರು ಹಿರಿಯ ಪತ್ರಕರ್ತರು ಪತ್ರಿಕೋಧ್ಯಮವನ್ನೇ ಉಸಿರಾಗಿಸಿಕೊಂಡಿದ್ದವರು. ಅವರ ಸೇವೆಗೆ ಹಲವು ಪ್ರಶಸ್ತಿಗಳು ಸಂದಿವೆ, ಶ್ರೀಯುತರ ಅಗಲಿಕೆಯಿಂದ ಉಂಟಾದ ದುಃಖ, ನೋವನ್ನು ಭರಿಸುವ ಶಕ್ತಿ ಕುಟುಂಬಕ್ಕೆ ದೊರೆಯಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ನಲ್ಲಿ ವೆಂಕಟರಾಮ್ ಅವರ ಅಂತ್ಯಸಂಸ್ಕಾರ ನೆರವೇರಿತು.