ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಅಪ್ರಚೋದಿತ ಗುಂಡಿನ ದಾಳಿಗೆ 2 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ಭಾನುವಾರ ನಡೆದಿದೆ.

ಅಖ್ನೂರ್ ಸೆಕ್ಟರ್’ನ ಪ್ರಗ್ವಾಲ್ ಪ್ರದೇಶದ ಅಂತರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಇಬ್ಬರನ್ನೂ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿತ್ತು. ಇದೀಗ ಇಬ್ಬರೂ ಯೋಧರು ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ದಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತ ಕೂಡ ದಿಟ್ಟ ಉತ್ತರವನ್ನು ನೀಡುತ್ತಿದೆ. ಗಡಿಯಲ್ಲಿ ಎರಡು ಸೇನಾ ಕಮಾಂಡರ್ ಪಡೆಗಳು ಆಗಮಿಸಿದ್ದು, ಗಡಿ ನಿಯಂತ್ರಣ ರೇಘೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿನ ಪರಿಸ್ಥಿತಿಗಳನ್ನು ಅವಲೋಕನ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ