ಬೆಂಗಳೂರು,ಜೂ.4- ದೀರ್ಘ ಕಾಲದಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿರುವ ಜಿ.ವಿ.ಕೃಷ್ಣಪ್ರಸಾದ್ ಅವರಿಗೆ ಪಕ್ಷದಿಂದ ಎಂಎಲ್ಸಿ ಸ್ಥಾನ ನೀಡಬೇಕೆಂದು ಕೊರಚ ಕೊರಮ ಸಮಾಜ ಮನವಿ ಮಾಡಿದೆ.
ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮಾತನಾಡಿ, ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಕೊರಮ ಕೊರಚ ಸಮಾಜದವರು ತೀರ ನಿಕೃಷ್ಟ ಜೀವನವನ್ನು ಪಾಲಿಸುತ್ತಿದ್ದಾರೆ.
ಇವರು ಸಾಮಾಜಿಕ ಆರ್ಥಿಕವಾಗಿ, ಶೈಕ್ಷಣಿಕವಾಗಿ,ರಾಜಕೀಯವಾಗಿ ಹಿಂದುಳಿದಿದ್ದು ಸುಮಾರು 20 ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಈ ಸಮಾಜಕ್ಕೆ ಯಾವುದೇ ಪ್ರಾತಿನಿಧ್ಯ ನೀಡಿರುವುದಿಲ್ಲ. ಆದ್ದರಿಂದ ನಮ್ಮ ಸಮಾಜ ಹಾಗೂ ಎಲ್ಲ ವರ್ಗದ ಅಭಿವೃದ್ಧಿಗಾಗಿ ಜಿ.ವಿ.ಕೃಷ್ಣಪ್ರಸಾದ್ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.