ವಿಶ್ವ ಪರಿಸರ ದಿನ: ಉದ್ಯಾನವನದಲ್ಲಿ ಗಿಡ ನೆಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮ ನಿವಾಸದ ಎದುರು ಇರುವ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನದ ಹಸಿರು ಅಭಿಯಾನಕ್ಕೆ ಚಾಲನೆ ನೀಡಿದರು.

ನಂತರ ಅವರು ಮಾತನಾಡಿ, ವಾತಾವರಣದಲ್ಲಿ ತಾಪಮಾನ ಏರಿಕೆಯಾಗುವುದನ್ನು ತಡೆಗಟ್ಟಲು ಮತ್ತು ಉತ್ತಮ ಮಳೆಯಾಗಲು ಹೆಚ್ಚೆಚ್ಚು ಗಿಡ, ಮರಗಳನ್ನು ಬೆಳೆಯಬೇಕು. ಪರಸರವನ್ನು ಕಾಪಾಡುವ ಜವಾಬ್ದಾರಿ ಇಂದು ಪ್ರತಿಯೊಬ್ಬ ಪ್ರಜೆಯ ಮೇಲಿದೆ. ಇದಕ್ಕೆ ನಾಡಿನ ಜನತೆ ಕೈಜೋಡಿಸಬೇಕೆಂದು ಆಶಿಸಿದರು.

ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ತಮ್ಮ ನಿವಾಸದ ಎದುರು ಉದ್ಯಾನವನದಲ್ಲಿ ಇಂದು ಬೆಳಗ್ಗೆ ಸಸಿ ನೆಟ್ಟರು. ಅವರ ಜೊತೆ ಕಾಂಗ್ರೆಸ್ ನಾಯಕಿ ಸೌಮ್ಯ ರೆಡ್ಡಿ, ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಕೂಡ ಇದ್ದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ