ನವದೆಹಲಿ,ಫೆ.23-ದೇಶಾದ್ಯಂತ ತಾಂಡವವಾಡುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಲೋಕಪಾಲ್ ಸಂಸ್ಥೆಯನ್ನು ನೇಮಕ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಸಂಬಂಧ ಮಾ.1ರಂದು ಮಹತ್ವದ ಸಭೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಈ ಸಂಬಂಧ ಸುಪ್ರೀಂಕೋರ್ಟ್‍ಗೆ ಇಂದು ಅಧಿಕೃತ ಹೇಳಿಕೆ ನೀಡಿರುವ ಕೇಂದ್ರ ಸರ್ಕಾರ, ಭ್ರಷ್ಟಾಚಾರ ನಿಗ್ರಹ ಸಂಸ್ಥೆಯಾದ ಲೋಕಪಾಲ್ ನೇಮಕ ಪ್ರಕ್ರಿಯೆ ಕುರಿತು ಮಾಹಿತಿ ನೀಡಿತು.
ಮಾರ್ಚ್ 1ರಂದು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ, ದೀಪಕ್ ಮಿಶ್ರ, ಲೋಕಸಭಾ ಅಧ್ಯಕ್ಷೆ ಸುಮಿತ್ರಾ ಮಹಾಜನ್ ಮತ್ತು ವಿರೋಧ ಪಕ್ಷದ ನಾಯಕ ಗುಲಾಂನಬಿ ಅವರ ನಡುವೆ ಲೋಕಪಾಲ್ ನೇಮಕ ಕುರಿತು ಮಹತ್ವದ ಸಭೆ ನಡೆಯಲಿದೆ ಎಂದು ಸರ್ಕಾರವು ಸರ್ವೋಚ್ಛ ನ್ಯಾಯಲಯಕ್ಕೆ ತಿಳಿಸಿದೆ.
ಭ್ರಷ್ಟಾಚಾರ ನಿಗ್ರಹಕ್ಕೆ ಲೋಕಪಾಲ್ ನೇಮಕಕ್ಕಾಗಿ ಆಗ್ರಹಿಸಿ ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ನಡೆಸಿದ ರಾಷ್ಟ್ರಮಟ್ಟದ ಆಂದೋಲನ ನಡೆಸಿದ್ದರು.