ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯ ಮತ ಎಣಿಕೆ ಬುಧವಾರ ಜಯನಗರ 4ನೇ “ಟಿ’ ಬ್ಲಾಕ್‌ನಲ್ಲಿರುವ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ನಡೆಯುತ್ತಿದ್ದು ಮೊದಲ ಸುತ್ತಿನಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಮುನ್ನಡೆ ಸಾಧಿಸಿದ್ದಾರೆ.
ಮೊದಲ ಸುತ್ತಿನಲ್ಲಿ ಬಿಜೆಪಿಯ ಅಭ್ಯರ್ಥಿ ಬಿ.ಎನ್ .ಪ್ರಹ್ಲಾದ್‌ಬಾಬು 3,322 ಮತ, ಕಾಂಗ್ರೆಸ್‌ನ ಸೌಮ್ಯಾರೆಡ್ಡಿ 3,749, ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾರೆಡ್ಡಿ 151 ಮತಗಳನ್ನು ಪಡೆದಿದ್ದಾರೆ.
ಮತ ಎಣಿಕೆಗೆ 14 ಟೇಬಲ್ ವ್ಯವಸ್ಥೆ ಮಾಡಿದ್ದು, 216 ಮತಗಟ್ಟೆಗಳ ಮತ ಎಣಿಕೆಯು 16 ಸುತ್ತಿಗಳಲ್ಲಿ ನಡೆಯಲಿದೆ.
ಶಾಸಕರಾಗಿದ್ದ ಬಿ.ಎನ್.ವಿಜಯಕುಮಾರ್ ನಿಧನ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿತ್ತು. ಜೆಡಿಎಸ್‌ಅಭ್ಯರ್ಥಿಯನ್ನು ಹಿಂಪಡೆದುಕೊಂಡಿತ್ತು.