ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ವಿಷಮ

ನವದೆಹಲಿ, ಜೂ.13-ಅನಾರೋಗ್ಯ ಸಮಸ್ಯೆಗಳಿಂದಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ವಿಷಮವಾಗಿದೆ ಎಂದು ಮೂಲಗಳು ತಿಳಿಸಿವೆ. ಮೂತ್ರನಾಳ, ಕೆಳ ಉಸಿರಾಟ ಮಾರ್ಗ ಸೋಂಕು ಹಾಗೂ ಮೂತ್ರಪಿಂಡ ಸಮಸ್ಯೆಗಳಿಂದ ನಿನ್ನೆ 93 ವರ್ಷದ ವಾಜಪೇಯಿ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೆರಿಯಾ ನೇತೃತ್ವದ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ಮುಂದುವರಿಸಿದೆ. ನಿನ್ನೆ ಅವರ ಆರೋಗ್ಯ ಸ್ಥಿರವಾಗಿತ್ತು. ಆದರೆ, ಇಂದು ಬೆಳಗ್ಗೆಯಿಂದ ಅವರ ದೇಹಸ್ಥಿತಿ ವಿಷಮವಾಗಿದೆ ಎಂದು ಮೂಲಗಳು ಹೇಳಿವೆ. ಈ ಮಧ್ಯೆ ವಾಜಪೇಯಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ದೇಶದ ವಿವಿಧೆಡೆ ಹೋಮ-ಹವನ ಹಾಗೂ ವಿಶೇಷ ಪೂಜೆಗಳು ನಡೆಯುತ್ತಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ