ಬೆಂಗಳೂರು, ಜೂ.16-ಅತಿವೇಗವಾಗಿ ಬರುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆಬದಿ ನಿಂತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೆ.ಆರ್.ಪುರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲತಃ ಗೌರಿಬಿದನೂರಿನ ವೆಂಕಟೇಶ್(37) ಮೃತಪಟ್ಟ ಲಾರಿ ಚಾಲಕ.
ತಡರಾತ್ರಿ 1 ಗಂಟೆ ಸಂದರ್ಭದಲ್ಲಿ ಟಿನ್ ಕಾರ್ಖಾನೆ ಬಳಿಯಿಂದ ಚನ್ನಸಂದ್ರದ ಕಡೆಗೆ ತೆರಳುತ್ತಿದ್ದ ಲಾರಿ ಮೇಲ್ಸೇತುವೆಯಲ್ಲಿ ರಸ್ತೆಬದಿ ನಿಂತಿದ್ದ ಮತ್ತೊಂದು ಲಾರಿ ಗಮನಕ್ಕೆ ಬಾರದೆ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ಎರಡು ವಾಹನಗಳ ಚಾಲಕ ವೆಂಕಟೇಶ್ ಸಿಕ್ಕಿಕೊಂಡು ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ರಸ್ತೆ ಬದಿ ನಿಲ್ಲಿಸಿದ್ದ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ.
ಸುದ್ದಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಕೆ.ಆರ್.ಪುರ ಸಂಚಾರಿ ಠಾಣೆ ಪೆÇಲೀಸರು ಸ್ಥಳಕ್ಕಾಗಮಿಸಿ ವಾಹನಗಳ ಮಧ್ಯೆ ಸಿಕ್ಕಿಕೊಂಡಿದ್ದ ಮೃತದೇಹವನ್ನು ಹೊರತೆಗೆಯಲು ಹರಸಾಹಸಪಟ್ಟರು.
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಆರ್.ಪುರ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.