ಲಖನೌ:ಜೂ-19: ಎಸ್ಎಸ್ಜೆ ಇಂಟರ್ ನ್ಯಾಷನಲ್ ಹೋಟೆಲ್ನಲ್ಲಿ ನಸುಕಿನ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಚಾರ್ಬಾಗ್ನಲ್ಲಿ ನಡೆದಿದೆ.
ಹೋಟೆಲ್ನ ಮೊದಲ ಹಂತದ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಎಲ್ಲ ಮಹಡಿಗಳಿಗೂ ಬೆಂಕಿ ಆವರಿಸಿತು. ಜೊತೆಗೆ ಕಾಮಗಾರಿ ಹಂತದಲ್ಲಿದ್ದ ಕಟ್ಟಡ ಹಾಗೂ ಪಕ್ಕದ ಹೋಟೆಲ್ಗೂ ಬೆಂಕಿ ತಗುಲಿದ್ದು, ಎರಡು ಹೋಟೆಲ್ಗಳು ನಾಶವಾಗಿದೆ ಎಂದು ತಿಳಿದು ಬಂದಿದೆ.
ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದುವರೆಗೆ 50 ಜನರನ್ನು ರಕ್ಷಣೆ ಮಾಡಲಾಗಿದ್ದು, ಗಾಯಾಳುಗಳನ್ನು ಸಮೀಪದ ಅಸ್ಪತ್ರೆಗೆ ದಾಖಲಿಸಲಾಗಿದೆ.
ಹೋಟೆಲ್ನ ಮೊದಲ ಮಹಡಿಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಐದು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಘಡದ ಕಾರಣ ತಿಳಿದು ಬಂದಿಲ್ಲ.
Fire,Charbagh’s SSJ International hotel,Uttar pradesh