ಮೈಸೂರು, ಜೂ.19-ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಒಳ ಹರಿವು ಹೆಚ್ಚಾಗುತ್ತಲೇ ಇದ್ದು, ಇಂದು 102 ಅಡಿ ನೀರು ಇತ್ತು. ಜಲಾಶಯದ ಗರಿಷ್ಠ ಮಟ್ಟ 124.84 ಅಡಿ ಜಲಾಶಯಕ್ಕೆ 7737 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ಹೊರಕ್ಕೆ 376 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ಕೊಡಗಿನಲ್ಲಿ ಮಳೆ ಕಡಿಮೆಯಾಗಿದೆ. ಆದರೆ ವಿವಿಧೆಡೆಯಿಂದ ಜಲಾಶಯಕ್ಕೆ ಹೆಚ್ಚು ನೀರು ಬರುತ್ತಿದೆ.