ಚಿತ್ರದುರ್ಗ, ಫೆ.24- ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿಯಲ್ಲಿ ಬಾಲಕ ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಬುಡ್ಡನಹಟ್ಟಿ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಗಂಗನಕಟ್ಟೆ ಗ್ರಾಮದ ವಿಶ್ವನಾಥ್(9) ಮೃತ ದುರ್ದೈವಿ.
ಕುಟುಂಬ ಸಮೇತ ತಿರುಪತಿಗೆ ತೆರಳಿ ದೇವರ ದರ್ಶನ ಪಡೆದು ಬಳ್ಳಾರಿಗೆ ಬಂದು ಖಾಸಗಿ ಬಸ್‍ನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ವಿಶ್ವನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬಸ್‍ನಲ್ಲಿದ್ದ ಇತರರ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಚಳ್ಳಕೆರೆ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.