ಮಂಗಳೂರು:ಜೂ-23: ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಯಾತ್ರಿಕರ ಮೇಲೆ ಕೈಕಂಬ ಬಳಿ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಆನೆ ದಾಳಿಗೆ ಸಿಲುಕಿ ಆರು ಮಂದಿ ಯಾತ್ರಿಕರು ಗಾಯಗೊಂಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಮಾರುತಿ ಒಮ್ನಿ ವ್ಯಾನ್ ಸಂಪೂರ್ಣ ಜಖಂಗೊಂಡಿದೆ.
ಶನಿವಾರ ಬೆಳಿಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ. ಹಿಂಬದಿ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕ ಜೋರಾಗಿ ಹಾರನ್ ಮಾಡಿದ್ದರಂತೆ ಆನೆ ಕಾಡಿನತ್ತ ನುಗ್ಗಿದೆ.
ಕಾರಿನಲ್ಲಿ ಒಟ್ಟು 8 ಮಂದಿ ಪ್ರಯಾಣಿಸುತ್ತಿದ್ದರು. ಯಾತ್ರಿಕರೆಲ್ಲರೂ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನವರಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
Mangalore, Elephant Attack,Kaikamba