ಭೋಪಾಲ್, ಜೂ.23-ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದಲ್ಲಿ ಇಂದು ಹಲವು ಮಹತ್ವದ ಯೋಜನೆಗಳ ಉದ್ಘಾಟನೆ ನೆರವೇರಿಸಿದರು. ಈ ವರ್ಷಾಂತ್ಯದಲ್ಲಿ ಮಧ್ಯಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯುವುದರಿಂದ ಬಹುಕೋಟಿ ರೂ.ಗಳ ಅಭಿವೃದ್ಧಿ ಯೋಜನೆ ಲೋಕಾರ್ಪಣೆ ಪ್ರಾಮುಖ್ಯತೆ ಪಡೆದುಕೊಂಡಿದೆ.
ರಾಜಘರ್ನಲ್ಲಿ ಮೋದಿ 3866 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಜಲಾಶಯವನ್ನು ಉದ್ಘಾಟಿಸಿದರು. ಮೋಹನಪುರ ನೀರಾವರಿ ಯೋಜನೆಯಿಂದ 727 ಗ್ರಾಮಗಳಿಗೆ ನೀರಾವರಿ ಸೌಲಭ್ಯ ಲಭಿಸಲಿದೆ.
ಮುಖ್ಯಮಂತ್ರಿ ಶಿವರಾಜ್ಸಿಂಗ್ ಚೌಹಾಣ್ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.